ಬೆಳಗಾವಿ:ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊಬ್ಬರು ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.
ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45) ಮೃತರು, ಈ ಕುರಿತು ಮೃತರ ಮಗಳು ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ಚಿತ್ರಹಿಂಸೆ ನೀಡಿ ನಮ್ಮ ತಂದೆಯನ್ನು ಕೊಂದಿದ್ದಾರೆ ಎಂದು ಮೃತ ಆರೋಪಿ ಬಸನಗೌಡ ಪಾಟೀಲ್ ಪುತ್ರಿ ರೋಹಿಣಿ ಪಾಟೀಲ್ ಗಂಭೀರವಾಗಿ ಆರೋಪಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ರೋಹಿಣಿ, ನಮ್ಮ ತಂದೆಯ ವಿರುದ್ಧ ಸುಳ್ಳು ಕೇಸ್ ಹಾಕಲಾಗಿದೆ. ನಮಗೆ ನ್ಯಾಯ ಸಿಗಬೇಕು. ಬಿಪಿ, ಶುಗರ್ ಸೇರಿ ಯಾವುದೇ ಸಮಸ್ಯೆ ಇರಲಿಲ್ಲ. ನಮ್ಮ ತಂದೆಯ ಕೈಗೆ ಹಗ್ಗ ಕಟ್ಟಿ, ಚಿತ್ರಹಿಂಸೆ ನೀಡಿದ್ದು, ಪೊಲೀಸ್ ಠಾಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45) ರನ್ನು ಗಾಂಜಾ ಪ್ರಕರಣದ ವಿಚಾರಣೆಗೆ ಬೆಳಗಾವಿಗೆ ಕರೆತರುವಾಗ ಕಾಕತಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಪೊಲೀಸರು ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದರು. ಈ ವೇಳೆ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಇನ್ನು ಪತ್ನಿ ನೀಡಿದ ದೂರು ಆಧರಿಸಿ, ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಒಪ್ಪಿಸಲಾಗುವುದು ಎಂದು ಡಿಸಿಪಿ ರವೀಂದ್ರ ಗದಾಡಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


