ತುಮಕೂರು: ಮೈಕ್ರೋ ಫೈನಾನ್ಸ್ ಗಳಿಂದ ಜನರಿಗೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರೂಪಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂತಹ ಕಿರುಕುಳ ಬೆಳಕಿಗೆ ಬಂದ ಸಂದರ್ಭದಲ್ಲಿ ಪೊಲೀಸರಿಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳುವ ಕುರಿತಂತೆ ಅಧಿಕಾರವನ್ನು ನೀಡುವ ಅವಶ್ಯಕತೆ ಇದ್ದು, ಈ ಬಗ್ಗೆ ಕೂಡ ಹೆಚ್ಚಿನ ಅಧಿಕಾರ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಸಿಎಂ ನಾವು ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಇರುವ ಕಾನೂನನ್ನ ಭದ್ರ ಮಾಡುವಂತದ್ದು, ಮತ್ತೊಂದು ರಿಕವರಿ ಮಾಡುವವರು ಸಂಜೆ ನಂತರ ದಾಳಿ ಮಾಡೋದು, ಅವಾಚ್ಯ ಶಬ್ದ ಬಳಕೆಯಿಂದ ಕಿರುಕುಳಕ್ಕೆ ಕಡಿವಾಣ ಹಾಕಬೇಕಿದೆ ಎಂದರು.
ಪೊಲೀಸರಿಗೆ ಎಕ್ಟ್ರಾ ಪವರ್ ಕೊಡೋಕೆ ರೆಡಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಈ ಕಾನೂನನ್ನ ತರಬೇಕು ಅಂತಾ ಒತ್ತಾಯ ಮಾಡ್ತೇವೆ. ಮುಖ್ಯಮಂತ್ರಿಗಳು ಸಹ ಪ್ರಧಾನಿಗಳಿಗೆ ಪತ್ರ ಬರೆಯುತ್ತೀನಿ ಅಂದಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx