ಬೀದರ್: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ 3 ದಿನಗಳಾದರೂ ಇನ್ನೂ ಪತ್ತೆಯಾಗದ ಕಾರಣ ಬೀದರ್ ಪೊಲೀಸರು ಡ್ರೋನ್ ಮೊರೆ ಹೋಗಿದ್ದಾರೆ.
3 ದಿನಗಳ ಹಿಂದೆ ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆ ದಾಟುವಾಗ 25 ವರ್ಷದ ಮಲ್ಲಪ್ಪ ಶರಣಪ್ಪ ಕರೆನವರ್ ನೀರಿನಲ್ಲಿ ಕೊಚ್ಚಿ ಹೋಗಿದ್ದ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಘಟನೆ ವರದಿಯಾಗಿದೆ.
ಇದೀಗ ಎಸ್ ಪಿ ಚೆನ್ನಬಸವಣ್ಣ ಲಂಗೋಟಿ ಸೂಚನೆಯಂತೆ ಯುವಕನ ಮೃತದೇಹವನ್ನು ಪತ್ತೆ ಮಾಡಲು ಡ್ರೋನ್ ಕ್ಯಾಮೆರಾ ಬಳಕೆ ಮಾಡಲಾಗುತ್ತಿದೆ. ಡ್ರೋನ್ ಕ್ಯಾಮೆರಾ ಬಳಸಿ ಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


