ಗುಬ್ಬಿ: ತಾಲ್ಲೂಕು ಕಲ್ಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮವಾದ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿಗಳಾದ ಡಾ. ದೀಪಕ್ ಗೋಲ್ಚ ರವರು, ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪಲ್ಸ್ ಪೋಲಿಯೊ ಲಸಿಕೆಯನ್ನು 5 ವರ್ಷಗಳ ಒಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಹಾಕಿಸಬೇಕು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದರು
ಇದೆ ಸಂದರ್ಭದಲ್ಲಿ ಫಾರ್ಮಷಿಷ್ಟ್ ಅಧಿಕಾರಿ NH ಉಮೇಶ್ ರವರು ಮಾತನಾಡಿ, ಪಲ್ಸ್ ಪೋಲಿಯೊ ಲಸಿಕೆಯನ್ನು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಸರ್ಕಾರವು ಉಚಿತವಾಗಿ ನೀಡಲಾಗುತ್ತಿದೆ . ಎಲ್ಲರೂ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ, ಪೋಲಿಯೊ ಮುಕ್ತ ಸಮಾಜ ನಿರ್ಮಾಣ ಮಾಡಿ. ಪೋಲಿಯೊ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ ವಂದಂತಿಗಳಿಗೆ ಕಿವಿಕೊಡಬೇಡಿ ಲಸಿಕೆಯನ್ನು ಹಾಕಿಸದಿದ್ದರೆ ಬೆಳೆಯುತ್ತಿರುವ ಮಕ್ಕಳಲ್ಲಿ ಅಂಗವಿಲತೆಯಾಗುವ ಸಾಧ್ಯತೆ ಇರುತ್ತದೆ ಎಂದು ಜಾಗೃತಿ ಮೂಡಿಸಿದರು.
ಇದೆ ಸಂದರ್ಭದಲ್ಲಿ ಸಮಾಜ ಸೇವಕರು, , ಶ್ರೀ ಜೈ ಮಾರುತಿ ಮೆಡಿಕಲ್ ಮಾಲೀಕರಾಗಿರುವ ಕೆ.ಟಿ. ಸೋಮಶೇಖರ್, ಫಾರ್ಮಸಿ ಅಧಿಕಾರಿಗಳಾದ NH ಉಮೇಶ್ ರವರು ಹಾಗೂ ಸಿಬ್ಬಂದಿ ವರ್ಗದವರು ಸ್ಥಳೀಯರು ಹಾಜರಿದ್ದರು.
ವರದಿ: ಯತೀಶ್ ಕುಮಾರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB