ಸಿರಾ: ಆರೋಗ್ಯ ಇಲಾಖೆ ತಾಲ್ಲೂಕಿನಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನಕ್ಕೆ ಸಿರಾ ತಾಲ್ಲೂಕು ಶಾಸಕ ಡಾ.ರಾಜೇಶ್ ಗೌಡ ಚಾಲನೆ ನೀಡಿದರು.
ಸಿರಾ ನಗರದ ಸಪ್ತಗಿರಿ ಬಡಾವಣೆಯಲ್ಲಿ ಐದು ವರ್ಷದ ಒಳಗಿನ ಮಗುವಿಗೆ ಪೊಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮಮತ, ತಾಲೂಕು ವೈದ್ಯಾಧಿಕಾರಿಗಳು ಡಾ.ಮೋಹನ್, ಡಾ. ಡಿ.ಎಂ.ಗೌಡ,ಡಾ ರಾಮಕೃಷ್ಣ ಅರೋಗ್ಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯು ತಾಲ್ಲೂಕಿನಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಹನಿ ಹಾಕುವ ಗುರಿಯನ್ನು ಹೊಂದಿದೆ. ಕೊರೋನಾ ಮೂರನೇ ಅಲೆಯಿಂದಾಗಿ ಕಳೆದ ಜನವರಿ ತಿಂಗಳಿನಲ್ಲಿ ನಡೆಯಬೇಕಾದ ಪೊಲಿಯೋ ಅಭಿಯಾನವನ್ನು ಮುಂದೂಡಲಾಗಿತ್ತು.
ಅಭಿಯಾನದಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳೂ ಲಸಿಕೆ ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆಯು ಕಾರ್ಯಕರ್ತರನ್ನು ಬಳಸಿಕೊಂಡು ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ತಾಲ್ಲೂಕಿನ ಎಲ್ಲಾ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB