nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
    Uncategorized July 8, 2026

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    By adminJuly 8, 2026No Comments2 Mins Read
    govindaraju.jpg

    ಸರಗೂರು: ಕಾನೂನು ವ್ಯವಸ್ಥೆ ಕಾಪಾಡಬೇಕಾದ ಶಾಸಕರೇ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ, ತಾಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆ (KPS) ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಸಿಡಿಸಿ (CDC) ಹಾಗೂ ಎಸ್ ಡಿಎಂಸಿ (SDMC) ಸದಸ್ಯರು ಮತ್ತು ಪೋಷಕರು ತೀರ್ಮಾನಿಸಿದ್ದಾರೆ.
    ಬಿ. ಮಟಕೆರೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಹಳ್ಳಿಗಳು ಹಾಗೂ ಗಿರಿಜನ ಹಾಡಿಗಳಿದ್ದು, ಇಲ್ಲಿನ ನೂರಾರು ಬಡ ಮಕ್ಕಳು ಈ ಕೆಪಿಎಸ್ ಶಾಲೆಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಶಾಲೆ ಪ್ರಾರಂಭವಾಗಿ 8 ವರ್ಷ ಕಳೆದಿದೆ. ಸರ್ಕಾರದ ಸುತ್ತೋಲೆಯ ಪ್ರಕಾರ, ಕರ್ನಾಟಕ ಪಬ್ಲಿಕ್ ಶಾಲೆಗೆ ಆಯಾ ಕ್ಷೇತ್ರದ ಶಾಸಕರೇ ಅಧ್ಯಕ್ಷರಾಗಿರಬೇಕು ಎಂಬ ನಿಯಮವಿದೆ.

    ಆದರೆ, ಸ್ಥಳೀಯ ಶಾಸಕರು, ಕೆಲವು ಕಾಂಗ್ರೆಸ್ ಮುಖಂಡರು ಹಾಗೂ ಶಾಲೆಯ ಪ್ರಿನ್ಸಿಪಾಲ್ ಸಂತೋಷ್ ಚಕ್ಕೋಡಿ ಮತ್ತು ಉಪ ಪ್ರಿನ್ಸಿಪಾಲ್ ಮಾರುತಿ ಗೌಡ ಅವರುಗಳು ಸರ್ಕಾರದ ಸುತ್ತೋಲೆಯನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಶಾಸಕರ ಅನುಪಸ್ಥಿತಿಯಲ್ಲಿ ‘ಮಾದಪ್ಪ’ ಎಂಬುವವರನ್ನು ಅಧ್ಯಕ್ಷರನ್ನಾಗಿ ಪತ್ರದ ಮೂಲಕ ಆಯ್ಕೆ ಮಾಡಿರುವುದು ಪೋಷಕರು ಮತ್ತು ಸದಸ್ಯರ ಕೆಂಗಣ್ಣಿಗೆ ಗುರಿಯಾಗಿದೆ.

    ಕಳೆದ ವರ್ಷ ನಡೆದ ಸಭೆಯಲ್ಲಿ ಸಿಡಿಸಿ ಮತ್ತು ಎಸ್ಡಿಎಂಸಿ ಸದಸ್ಯರು ಹಾಗೂ ಪೋಷಕರು ಸೇರಿ ಈ ರಾಜಕೀಯ ನೇಮಕಾತಿಯನ್ನು ಕಡ್ಡಾಯವಾಗಿ ತಿರಸ್ಕರಿಸಿದ್ದರು. “ಸರ್ಕಾರದ ನಿಯಮದಂತೆ ಶಾಸಕರೇ ಅಧ್ಯಕ್ಷರಾಗಿರಲಿ, ಇಲ್ಲವಾದರೆ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪೋಷಕರಿಗೇ ಅಧ್ಯಕ್ಷ ಸ್ಥಾನ ನೀಡಬೇಕು” ಎಂದು ಪಟ್ಟು ಹಿಡಿದಿದ್ದರು.
    ಇದಾದ ಬಳಿಕ, ಶಾಸಕ ಅನಿಲ್ ಚಿಕ್ಕಮಾದು ಅವರು ಕಳೆದ ಮಾರ್ಚ್ 5 ರಂದು ಶಾಲೆಗೆ ಭೇಟಿ ನೀಡಿ, “ಸರ್ಕಾರದ ಸುತ್ತೋಲೆಯಂತೆ ನಾನೇ ಅಧ್ಯಕ್ಷನಾಗಿ ಮುಂದುವರೆಯುತ್ತೇನೆ, ನೀವು ಉಪಾಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಿ” ಎಂದು ಪತ್ರ ನೀಡಿದ್ದರು.

    ಮತ್ತೆ ನಿಯಮ ಉಲ್ಲಂಘಿಸಿದ ಶಾಸಕರು?

    ಆದರೆ, ಶಾಸಕರು ತಮ್ಮ ಮಾತಿಗೆ ತಪ್ಪಿ ಜುಲೈ 1 ರಂದು ಮತ್ತೊಂದು ಪತ್ರದ ಮೂಲಕ ‘ಬಡಗ ಮಾದಪ್ಪ’ ಅವರನ್ನೇ ಅಧ್ಯಕ್ಷರಾಗಿ ಮುಂದುವರೆಯುವಂತೆ ಶಾಲೆಗೆ ಶಿಫಾರಸು ಮಾಡಿದ್ದಾರೆ. ಇದು ಸರ್ಕಾರದ ಸುತ್ತೋಲೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಶಾಲಾ ಆಡಳಿತದಲ್ಲಿ ರಾಜಕೀಯ ಬೆರೆಸಲಾಗುತ್ತಿದೆ ಎಂದು ಸಿಡಿಸಿ ಸದಸ್ಯ ಕೂಡಗಿ ಗೋವಿಂದರಾಜು ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜುಲೈ 6ರ ಸಭೆಯಲ್ಲಿ ಪ್ರತಿಭಟನೆಯ ತೀರ್ಮಾನ:

    ಶಾಸಕರ ಮತ್ತು ಶಾಲಾ ಆಡಳಿತ ಮಂಡಳಿಯ ಈ ಧೋರಣೆಯನ್ನು ಖಂಡಿಸಿ ಜುಲೈ 6 ರಂದು ಎಸ್ಡಿಎಂಸಿ ಮತ್ತು ಸಿಡಿಸಿ ಸದಸ್ಯರು, ಪೋಷಕರು ಹಾಗೂ ಮಕ್ಕಳು ತುರ್ತು ಸಭೆ ನಡೆಸಿದ್ದಾರೆ. ಶಾಸಕರ ವಿರುದ್ಧ ಕರ್ನಾಟಕ ಪಬ್ಲಿಕ್ ಶಾಲೆಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ದಿನಾಂಕವನ್ನು ನಿಗದಿಪಡಿಸಿ, ಹೋರಾಟ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

    ಈ ಪ್ರಮುಖ ಸಭೆಯಲ್ಲಿ ಸಿಡಿಸಿ ಹಾಗೂ ಎಸ್ ಡಿಎಂಸಿ ಸದಸ್ಯರುಗಳಾದ ಚಂದುಸಾರಿಪ್, ಕೂಡಗಿ ಗೋವಿಂದರಾಜು, ನವೀನ ದೇವಲಾಪುರ, ಪ್ರಸನ್ನ ಬಡಗ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.