ತುಮಕೂರು: ಹೇಮಾವತಿ ಕೆನಾಲ್ ವಿರುದ್ಧ ರಾಜಕೀಯ ನಾಯಕರ ಹೋರಾಟ ಹಿನ್ನೆಲೆ ಬಿಜೆಪಿ, ಜೆಡಿಎಸ್ ಶಾಸಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆ ಕಾಂಟ್ರ್ಯಾಕ್ಟ್ ಪಡೆದ ಕಂಪನಿಯ ಸಿಬ್ಬಂದಿ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ.
ಎ 1 ತುರುವೇಕೆರೆ ಜೆಡಿಎಸ್ ಶಾಸಕ ಕೃಷ್ಣಪ್ಪ ಎಂ.ಟಿ., ಎ 2 ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಎ 3 ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್, ಎ 4 ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ, ಎ 5 ಜಿಲ್ಲಾ ರೈತ ಸಂಘದ ಅಧ್ಯಕ್ಷ ಗೊವಿಂದರಾಜು, ಎ 6 ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಎ 7 ಚೇತನ್ ಹಾಗೂ ಎ8 ಇತರ 25 ರಿಂದ 30 ಮಂದಿ ಎಂದು ಎಫ್ ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW