ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ನಡೆದ ದಾಳಿ ಭಯೋತ್ಪಾದಕ ದಾಳಿ ಎಂದು ಸೇನೆ ಖಚಿತಪಡಿಸಿದೆ.
ಮಧ್ಯಾಹ್ನ ಸೇನಾ ಟ್ರಕ್ ಮೇಲೆ ನಡೆದ ದಾಳಿಯಲ್ಲಿ ಐವರು ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಓರ್ವ ಯೋಧ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನದಲ್ಲಿದ್ದವರೆಲ್ಲರೂ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವಿಭಾಗದ ಸೈನಿಕರು.
ಭಯೋತ್ಪಾದಕರು ವಾಹನದತ್ತ ಗುಂಡು ಹಾರಿಸಿ ನಂತರ ಗ್ರೆನೇಡ್‌ಗಳನ್ನು ಎಸೆದರು. ಗ್ರೆನೇಡ್ ದಾಳಿಯಲ್ಲಿ ವಾಹನ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿ ಪಡೆಗಳನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಉಗ್ರರಿಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


