ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕೇಸ್ ಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರ ಮೇಲಿನ ಕಳಂಕ ದೂರವಾಗಲಿ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವಸಹಾಯ ಸಂಘದ ಸದಸ್ಯರು ಹುಳಿಯಾರು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವಸಹಾಯ ಸಂಘದ ಸದಸ್ಯರು ಪಾದಯಾತ್ರೆಯ ಮೂಲಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.
ಈ ವೇಳೆ ಮಾಜಿ ಶಾಸಕ ಕಿರಣ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಹುಳಿಯಾರು ಪಟ್ಟಣದಲ್ಲಿ ಮರೆವಣಿಗೆ ನಡೆಸಿದ ಬಳಿಕ ಪೂಜೆ ಸಲ್ಲಿಸಲಾಯಿತು.


