ತುಮಕೂರು: ಸ್ವೀಟ್ ಅಂಗಡಿಯೊಂದರಲ್ಲಿ ಕಳಪೆ ಗುಣಮಟ್ಟದ ಸ್ವೀಟ್ ಮಾರಾಟ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ತುಮಕೂರು ನಗರದಲ್ಲಿ ಫುಡ್ ಸೇಫ್ಟಿ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಮಹಾಲಕ್ಷ್ಮಿ ಸ್ವೀಟ್ಸ್ ಅಂಗಡಿಯಲ್ಲಿ ರಘುಕುಮಾರ್ ಎಂಬುವರು ರಸಮಲೈ ಖರೀದಿಸಿದ ವೇಳೆ ಅದು ಕಳಪೆ ಗುಣಮಟ್ಟದಿಂದ ಕೂಡಿದ್ದಾಗಿದೆ ಎಂದು ಖಚಿತಪಡಿಸಿಕೊಂಡ ನಂತರ ತಾವು ಮೋಸ ಹೋದ ಹಿನ್ನೆಲೆಯಲ್ಲಿ ಆಹಾರ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಆಫೀಸರ್ ನಾರಾಯಣಪ್ಪ ಎಂಬವರು ಸ್ವೀಟ್ ಅನ್ನು ಸೀಲ್ ಮಾಡಿ ಲ್ಯಾಬ್ ಗೆ ಕಳುಹಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW