ತುಮಕೂರು: ಉಕ್ರೇನ್ ನಲ್ಲಿ ಸಿಲುಕಿರುವ ತುಮಕೂರಿನ ವಿದ್ಯಾರ್ಥಿಗಳ ಪೋಷಕರ ಮನೆಗಳಿಗೆ ಶಾಸಕ ಜ್ಯೋತಿ ಗಣೇಶ್ ಅವರು ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದರು.
ವಿದ್ಯಾರ್ಥಿನಿ ರೂಪಶ್ರೀ ಹಾಗೂ ಸಮಂತ್ ಪೋಷಕರ ಮನೆಗೆ ಭೇಟಿ ನೀಡಿದ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಧೈರ್ಯವಾಗಿರುವಂತೆ ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಿದ್ದಾರೆ.
ತುಮಕೂರಿನ ಕ್ಯಾತಸಂದ್ರ ಬಳಿ ಬಸವಪಟ್ಟಣದಲ್ಲಿ ರೂಪಶ್ರೀ ಹಾಗೂ ಸಮಂತ್ ಪೋಷಕರ ಮನೆ ಇದೆ. ಇವರ ಮನೆಗೆ ಭೇಟಿ ನೀಡಿದ ಶಾಸಕರು, ತುಮಕೂರು ನಗರದಿಂದ ತೆರಳಿರುವ ವಿದ್ಯಾರ್ಥಿಗಳ ರಕ್ಷಣೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಧೈರ್ಯ ತುಂಬಿದರು.
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB