ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಮಧ್ಯೆ ಪೋಷಕರು ಬೈದಿದ್ದಕ್ಕೆ 7 ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ನೇಣಿಗೆ ಶರಣಾದ ಬಾಲಕ. ನಿನ್ನೆ ಸಂಜೆ 7 ಗಂಟೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮನೆಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಪೋಷಕರು ಬೈದಿದ್ದಕ್ಕೆ ಮನೆಯ ಟೆರೇಸ್ ಮೇಲೆ ಸಾಯಿಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


