ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಪಿಯುಸಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕು ವ್ಯಾಪ್ತಿಯ ಸತ್ಯಮಂಗಲದ ಸಾರ್ವಜನಿಕ ಮಾದರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ; ಕುಣಿಗಲ್ ರಸ್ತೆ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯ; ಸೋಮೇಶ್ವರ ಬಡಾವಣೆ, ದಿಬ್ಬೂರು, ಗಾರ್ಡನ್‌ರಸ್ತೆ, ಕುಣಿಗಲ್ ರಸ್ತೆ ಹಾಗೂ ಕೋತಿತೋಪಿನಲ್ಲಿರುವ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ; ರೈಲ್ವೇಸ್ಟೇಷನ್ ರಸ್ತೆ, ಉಪ್ಪಾರಹಳ್ಳಿ, ಶಿರಾಗೇಟ್ ರಸ್ತೆಯ ಸಾಯಿ ಬಡಾವಣೆ, ಸರಸ್ವತಿಪುರಂ, ಶಿರಾಗೇಟ್ ಅರಳೀಮರದ ಪಾಳ್ಯದ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ; ರೈಲ್ವೇಸ್ಟೇಷನ್ ರಸ್ತೆ ಹಾಗೂ ಕುಣಿಗಲ್ ರಸ್ತೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು.
ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 20ರೊಳಗಾಗಿ ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿ-ಅಂಚೆ: bcwdhelpline@gmail.com ಮೂಲಕ ಅಥವಾ ಜಿಲ್ಲಾ/ ತಾಲ್ಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2251736 ಅಥವಾ ಸಹಾಯವಾಣಿ ಸಂಖ್ಯೆ: 8050770004 / 8050770005ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW