ತುಮಕೂರು: ಹಿಂದುಳಿದ ವರ್ಗರ್ಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಪಿಯುಸಿ, ಐಟಿಐ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾತ್ರ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 20ರೊಳಗಾಗಿ ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಜೂನ್ 23ರಂದು ಪರಿಶೀಲಿಸಲಿದ್ದಾರೆ. ತಾಲ್ಲೂಕು ಸಮಿತಿಯ ಮೂಲಕ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಪಟ್ಟಿಯನ್ನು ಜೂನ್ 27ರಂದು ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಜೂನ್ 30ರೊಳಗಾಗಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯತಕ್ಕದ್ದು.
ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿ-ಅಂಚೆ: bcwdhelpline@gmail.com ಮೂಲಕ ಅಥವಾ ಜಿಲ್ಲಾ/ ತಾಲ್ಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 / 8050770005ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW