ತುಮಕೂರು: ಅಂಚೆ ಅಧೀಕ್ಷಕರ ಕಾರ್ಯಾಲಯದಿಂದ ಮಾರ್ಚ್ 26ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅದಾಲತ್ ಕಾರ್ಯಕ್ರಮವು ಗಾಂಧಿನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಅಂಚೆ ಸೇವೆಗೆ ಸಂಬಂಧಿಸಿದ ದೂರು/ಸಲಹೆ/ಸೂಚನೆಗಳಿದ್ದಲ್ಲಿ ಮಾರ್ಚ್ 25ರೊಳಗಾಗಿ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬೇಕೆಂದು ಅಂಚೆ ಅಧೀಕ್ಷಕ ಬಿ.ಎಂ. ಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4