ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಜೀವನಾಧಾರಿತ ಚಿತ್ರ ಘೋಷಣೆಯಾಗಿದ್ದು, ಅಜೇ: ದಿ ಅನ್ಟೋಲ್ಡ್ ಸ್ಟೋರಿ ಆಫ್ ಎ ಯೋಗಿ ಎಂಬ ಚಿತ್ರದ ಪೋಸ್ಟರ್ ಅನಾವರಣ ಮಾಡಲಾಗಿದೆ.
ಶಾಂತನು ಗುಪ್ತ ಅವರ ದಿ ಮಾಂಕ್ ಹೂ ಬಿಕಮ್ ಚೀಫ್ ಮಿನಿಸ್ಟರ್ ಎಂಬ ಪುಸ್ತಕವನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗಲಿದೆ. ಪೋಸ್ಟರ್ನಲ್ಲಿ ನಟ ಅನಂತ್ ಜೋಶಿ ಅವರು ಯೋಗಿ ಆದಿತ್ಯನಾಥ್ ಪಾತ್ರವನ್ನು ನಿರ್ವಹಿಸಿದ್ದಾರೆ.
ಹಳ್ಳಿಯ ಮಧ್ಯಮ ವರ್ಗದ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯಾಗುವ ಕಥೆ ಈ ಚಿತ್ರದ ಕಥೆಯಾಗಿದ್ದು, ಈ ವರ್ಷವೇ ಸಿನಿಮಾ ರಿಲೀಸ್ ಗೆ ಚಿತ್ರತಂಡ ಪ್ಲ್ಯಾನ್ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4