ಬೆಂಗಳೂರು: ಪೂರ್ಣ ಪ್ರಮಾಣದ ಕ್ಯಾಬಿನೆಟ್ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದ್ದು ಶನಿವಾರ 24 ಸಂಭಾವ್ಯ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಬೆಳಗ್ಗೆ 11:45ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ರಾಜ್ಯಪಾಲರ ಕಚೇರಿಯಿಂದ ಸಿಎಂ ಕಚೇರಿ ಸಮಯ ಪಡೆದಿದೆ. ಮುಂದಿನ ಎರಡೂವರೆ ವರ್ಷ ಯಾವುದೇ ತಕರಾರುಗಳಿಲ್ಲದೇ ಸರ್ಕಾರ ನಡೆಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ.
ಹೆಚ್.ಕೆ.ಪಾಟೀಲ್, ಮಂಕಾಳ ವೈದ್ಯ, ಶಿವಾನಂದ ಪಾಟೀಲ್, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ಡಾ.ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ಕೆ.ವೆಂಕಟೇಶ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಇನ್ನು, ವಿಧಾನಸಭೆ ಉಪಸಭಾಪತಿ ಸ್ಥಾನ ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


