nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಕ್ಕೆ ವಿದ್ಯುತ್ ಸಂಕಷ್ಟ: ಶ್ವೇತಪತ್ರ ಹೊರಡಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
    ರಾಜ್ಯ ಸುದ್ದಿ October 11, 2023

    ರಾಜ್ಯಕ್ಕೆ ವಿದ್ಯುತ್ ಸಂಕಷ್ಟ: ಶ್ವೇತಪತ್ರ ಹೊರಡಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

    By adminOctober 11, 2023No Comments3 Mins Read
    kumaraswami

    ಬೆಂಗಳೂರು: ನವರಾತ್ರಿಗೆ ಮೊದಲಿಗೆ ರಾಜ್ಯದ ಜನರಿಗೆ ಕತ್ತಲೆಭಾಗ್ಯ ಖಾತರಿಪಡಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಹೊಸ ವರ್ಷಕ್ಕೆ ಅದನ್ನು ಜಾರಿ ಮಾಡಲು ಹುನ್ನಾರ ನಡೆಸಿದೆ. ಇದು ಆರನೇ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.

    ಈ ಬಗ್ಗೆ ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರ್ಕಾರದ ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣಾ ವೈಫಲ್ಯದಿಂದ ಕರ್ನಾಟಕವನ್ನು ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ವಿದ್ಯುತ್ ಕ್ಷಾಮಕ್ಕೆ ದೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು!! ಎಂದು ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತದೆ ಸರಕಾರ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.

    ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಎಂದು ಇಂಧನ ಸಚಿವರನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ!! ಎಂದು ಸರಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ ಅವರು.

    ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದ್ದಾರೆ.

    ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ  ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರಕಾರದ ಉತ್ತರವೇನು? ಎಂದು ಅವರು ಪ್ರಶ್ನಿಸಿದ್ದಾರೆ.

    ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.