ದೆಹಲಿ: ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ-ಸಮವಸ್ತ್ರ ಪೂರೈಕೆ ವಿಳಂಬಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಜೈಲಿನಿಂದ ಅಧಿಕಾರ ನಡೆಸುತ್ತಿರುವ ಕೇಜ್ರಿವಾಲ್ ಗೆ ದೇಶಕ್ಕಿಂತ ಅಧಿಕಾರವೇ ಮುಖ್ಯವಾಯಿತೆ ಎಂದು ಚಾಟಿ ಬೀಸಿರುವ ಹೈಕೋರ್ಟ್, ಸರ್ಕಾರ ಮಕ್ಕಳ ಶಿಕ್ಷಣದ ಬಗ್ಗೆ ಅವರ ಭವಿಷ್ಯದ ಬಗ್ಗೆ ಯಾವುದೇ ಚಿಂತೆ ಇಲ್ಲ. ಮಕ್ಕಳಿಗೆ ಪಠ್ಯ ಪುಸ್ತಕ ಸಿಗುತ್ತಿಲ್ಲ. ಮೂಲಭೂತ ಹಕ್ಕಾದ ಶಿಕ್ಷಣ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಹೇಳಿದೆ.
ದೆಹಲಿಯಲ್ಲಿ ಆಡಳಿತ ಮಾಡುತ್ತಿರುವ ಎಎಪಿ ಪಕ್ಷ ಕೇವಲ ಅಧಿಕಾರಕ್ಕೆ ಅಂಟಿಕೊಂಡಿದೆ. ಸಿಎಂ ಕೇಜ್ರಿವಾಲ್ ಗೆ ಜನರ ಹಿತಕ್ಕಿಂತ ವೈಯಕ್ತಿಕ ರಾಜಕೀಯ ಮೇಲಾಟವೇ ಮುಖ್ಯವಾಗಿದೆ ಎಂದು ಎಎಪಿ ಪರ ವಕೀಲರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ವೈಯಕ್ತಿಕ ಪ್ರತಿಷ್ಠೆಗೆ ಜೋತು ಬಿದ್ದಿರುವ ಕೇಜ್ರಿವಾಲ್ ರಾಜೀನಾಮೆ ನೀಡದೆ ರಾಜಕೀಯ ಡ್ರಾಮಾ ಮಾಡುತ್ತಿದ್ದಾರೆ. ಮುಖ್ಯಮಂತ್ರಿ, ಸಚಿವರು ಜೈಲಿನಲ್ಲಿದ್ದುಕೊಂಡು ಉತ್ತಮ ಆಡಳಿತ, ಜನರಿಗೆ ಸ್ಪಂದನೆ ನೀಡಲು ಸಾಧ್ಯವೇ? ಎಂದು ನ್ಯಾಯಪೀಠ ಪ್ರಶ್ನಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296