ತುಮಕೂರು: ಬೆವಿಕಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ಗೋಪುರ ನಿರ್ಮಾಣ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾರ್ಚ್ 2 ಹಾಗೂ 9ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಮೆಳೇಕೋಟೆ, ಬೆಳ್ಳಾವಿ, ಹೆಗ್ಗೆರೆ, ಮಲ್ಲಸಂದ್ರ, ಬಡ್ಡಿಹಳ್ಳಿ, ದೊಡ್ಡ ಸಾರಂಗಿ ಉಪಸ್ಥಾವರಗಳಿಗೆ ಒಳಪಡುವ ಗ್ರಾಮ/ನಗರ/ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ 8 ಗಂಟೆ ಹಾಗೂ ಸಂಜೆ 4 ರಿಂದ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4