ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದು ಸರಿಯಾಗಿದೆ ನನ್ನ ಬೇರೇನು ಕೇಳಬೇಡಿ ಎಂದು ಸಚಿವ ಮುನಿಯಪ್ಪ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಡಾ.ಜಿ.ಪರಮೇಶ್ವರ್ ಸಹಿತ ಇತರ ಕಾಂಗ್ರೆಸ್ ನಾಯಕರು ಅಧಿಕಾರ ಹಂಚಿಕೆ ಒಪ್ಪಂದ ಸುದ್ದಿಯನ್ನ ತಳ್ಳಿ ಹಾಕಿದ್ದರೆ, ಸಚಿವ ಮುನಿಯಪ್ಪ ಹಂಚಿಕೆ ಒಪ್ಪಂದ ಆಗಿದೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದು ಸರಿಯಾಗಿದೆ ನನ್ನ ಬೇರೇನು ಕೇಳಬೇಡಿ ಎಂದಿದ್ದಾರೆ.
ಇನ್ನು ಬಿಜೆಪಿ ಹೋರಾಟದ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಹೆಚ್ಚು ಹೋರಾಟ ಮಾಡಿದಂತೆಲ್ಲಾ ಅದು ಕಾಂಗ್ರೆಸ್ ಗೆ ಹೆಚ್ಚು ಅನುಕೂಲ. ಆದರೆ, ಬಿಜೆಪಿಯವರು ಅಧಿಕಾರಕ್ಕೆ ಬರೋ ಚಿಂತನೆಯಲ್ಲಿದ್ದಾರೆ ಎಂದರು.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ಸಂದರ್ಭದಲ್ಲಿ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ನಮ್ಮ ನಡುವೆ ಕೆಲವು ಒಪ್ಪಂದವಾಗಿದೆ. ಅದನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆ ಮೂಲಕ ಅಧಿಕಾರ ಹಸ್ತಾಂತರ ಕುರಿತ ವದಂತಿಗಳಿಗೆ ಮರು ಜೀವ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx