ನೇಪಿಡಾವ್ (ಮ್ಯಾನ್ಮಾರ್): ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ನಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮವಾಗಿ ಸುಮಾರು 700 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸುಮಾರು 1,700 ಜನರು ಗಾಯಗೊಂಡಿದ್ದಾರೆ.
ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಅನೇಕ ಸಾವು-ನೋವುಗಳು ವರದಿಯಾಗಿವೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ.
ಶುಕ್ರವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೇಶದ ದೊಡ್ಡ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ದೇಶದ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ, ಇದು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರದಲ್ಲಿದ್ದು, ಪ್ರಕೃತಿ ವಿಕೋಪದಿಂದ ಭಾರೀ ವಿನಾಶ ಕಂಡಿದೆ.
ಮ್ಯಾನ್ಮಾರ್ ಗೆ ಭಾರತ ನೆರವು, ಅಗತ್ಯ ಸಾಮಗ್ರಿಗಳ ರವಾನೆ
ಭೂಕಂಪದಿಂದ ಅಪಾರ ಸಾವು-ನೋವು ನಷ್ಟ ಉಂಟಾಗಿರುವ ಮ್ಯಾನ್ಮಾರ್ ಸಹಾಯಕ್ಕೆ ಭಾರತ ಮುಂದಾಗಿದೆ. ಮಾನವೀಯ ನೆರವು ನೀಡಲು ವಿಮಾನವನ್ನು ಕಳುಹಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4