ಬೀದರ್: ಬಿಜೆಪಿ ರಾಜ್ಯಾಧ್ಯಕ್ಷರ ಎದುರೇ ಭಗವಂತ್ ಖೂಬಾ ಹಾಗೂ ಔರಾದ ಶಾಸಕರಾದ ಪ್ರಭು ಚವ್ಹಾಣ್ ಅವರ ನಡುವಿನ ಭಿನ್ನಮತ ಬಹಿರಂಗವಾಗಿದ್ದು. ಈ ಬಾರಿ ಖೂಬಾಗೆ ಟಿಕೆಟ್ ಕೊಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕಾಲಿಗೆ ಬಿದ್ದು ಪ್ರಭು ಚವ್ಹಾಣ್ ಹೈಡ್ರಾಮ ನಡೆಸಿದರು.
ಬೀದರ್ ನಗರದ ಗಣೇಶ ಮೈದಾನದಲ್ಲಿ ಜರುಗಿದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ವೇದಿಕೆಯಲ್ಲಿ ವಿಜಯೇಂದ್ರ ಅವರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್ ಖೂಬಾಗೆ ಟಿಕೆಟ್ ಕೊಡಬೇಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಳ್ಳೆಯ ವ್ಯಕ್ತಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕುಡಚಿ ಶಾಸಕ ರಾಜೀವ್, ರಾಜ್ಯ ಕಾರ್ಯದರ್ಶಿಗಳು ಶರಣು ತಳ್ಳಿಕೇರಿ ಸೇರಿದಂತೆ ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್


