nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026

    ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)

    June 16, 2026
    Facebook Twitter Instagram
    ಟ್ರೆಂಡಿಂಗ್
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    • ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ
    • ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈಶಿಷ್ಠ್ಯಪೂರ್ಣವಾಗಿ ಫಲ–ಪುಷ್ಪ ಪ್ರದರ್ಶನ ಏರ್ಪಡಿಸುವಂತೆ ಜಿ.ಪ್ರಭು ಸೂಚನೆ
    ತುಮಕೂರು December 19, 2024

    ವೈಶಿಷ್ಠ್ಯಪೂರ್ಣವಾಗಿ ಫಲ–ಪುಷ್ಪ ಪ್ರದರ್ಶನ ಏರ್ಪಡಿಸುವಂತೆ ಜಿ.ಪ್ರಭು ಸೂಚನೆ

    By adminDecember 19, 2024No Comments1 Min Read
    g prabhu

    Provided by
    Provided by

    ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ ಮಾಹೆಯ ಅಂತ್ಯದಲ್ಲಿ ಫಲ–ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ಫಲ–ಪುಷ್ಪ ಪ್ರದರ್ಶನವನ್ನು ವೈಶಿಷ್ಠ್ಯಪೂರ್ಣವಾಗಿ ಏರ್ಪಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಫಲ–ಪುಷ್ಪ ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಫಲ–ಪುಷ್ಪ ಪ್ರದರ್ಶನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಕೃಷಿ, ಮೀನುಗಾರಿಕೆ, ಪಶು ಸಂಗೋಪನೆ, ಅರಣ್ಯ, ರೇಷ್ಮೆ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಾಹಿತಿಯುಕ್ತವಾದ ಮಳಿಗೆಗಳನ್ನು ತೆರೆದು ವಸ್ತುಪ್ರದರ್ಶನವನ್ನು ಏರ್ಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಹಳ್ಳಿಯಲ್ಲಿ ಕಣ್ಮರೆಯಾಗುತ್ತಿರುವ ಆಹಾರ ಪದಾರ್ಥಗಳು ಮತ್ತು ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ವಿಶೇಷ ವಸ್ತು ಪ್ರದರ್ಶನ ಏರ್ಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಮೌಲ್ಯಯುತ ಪುಸ್ತಕಗಳ ಪ್ರದರ್ಶನ ಏರ್ಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

    ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಾರದಮ್ಮ ಮಾತನಾಡಿ, ಈ ಬಾರಿಯ ಫಲ–ಪುಷ್ಪ ಪ್ರದರ್ಶನದಲ್ಲಿ ಮಂದಾರಗಿರಿ ದೇವಸ್ಥಾನ, ಕೈದಾಳ ಚನ್ನಕೇಶವ ಸ್ವಾಮಿ ವಿಗ್ರಹ, ಜಾನೂರ್ ಕಲೆಯಿಂದ ರೈತ ಜೀವನ ಶೈಲಿ ಚಿತ್ರಣ, ತೆಂಗಿನಕಾಯಿ ಮತ್ತು ಅಡಿಕೆ ಕರಕುಶಲ ಪ್ರದರ್ಶನ, ವಿವಿಧ ರೀತಿಯ ಅಣಬೆ ಮತ್ತು ಮೈಕ್ರೋ ಗ್ರೇನ್ಸ್ ಪ್ರದರ್ಶನ ಸೇರಿದಂತೆ ವಿವಿಧ ರೀತಿಯ ವಿಶೇಷ ಹಣ್ಣು, ತರಕಾರಿ ಮತ್ತು ಹೂವುಗಳ ಪ್ರದರ್ಶನವನ್ನು ಏರ್ಪಡಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

    ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಪಶು ಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಗಿರೀಶ್ ಬಾಬು ರೆಡ್ಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)

    June 16, 2026

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    June 15, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ಪಾವಗಡ: ಪಟ್ಟಣದ ಶ್ರೀನಿವಾಸ ನಗರದ ಜ್ಞಾನ ಬೋಧಿನಿ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಸ್ಕೂಲ್ ಪ್ಯುಪಿಲ್ ಲೀಡರ್ SPL ಚುನಾವಣೆಯು…

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026

    ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)

    June 16, 2026

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.