ಬೆಂಗಳೂರು: ಬಿಜೆಪಿಯವರಿಗೆ ಸಾವಿನ ಮನೆ ರಾಜಕಾರಣ ಮಾಡೋದು ಇನ್ನೂ ತಪ್ಪಿಲ್ಲ. ಅವರ ಪಕ್ಷದ ಕಾರ್ಯಕರ್ತರು ಅವರ ಮೇಲೆ ತಿರುಗಿ ಬಿದ್ದಿದರಿಂದ ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ್ದು ಅವರಿಗೆ ಬಿಟ್ಟಿದ್ದು. ಆದರೆ ಪ್ರಚೋದನಕಾರಿ ಹೇಳಿಕೆ ಕೊಟ್ಟು, ಕೊಟ್ಟು ಬಲಿ ತೆಗೆದುಕೊಂಡಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಮನೆ ಮೇಲೆ ಅವರೇ ಕಲ್ಲು ಹೊಡೆದುಕೊಳ್ಳಬೇಕು. ಈ ಹಿಂದೆ ಈ ರೀತಿಯ ಸಾವು ಆಗಲಿ ಎಂದು ಕಾದು ಕುಳಿತಿದ್ದರು. ಹಿಂದೆ ವೈಯಕ್ತಿಕ ಸಾವುಗಳನ್ನು ರಾಜಕೀಯ ದ್ವೇಷದ ಸಾವುಗಳಾಗಿ ಮಾಡಿದ್ರು. ಹತ್ಯೆಗಳು ಎಲ್ಲಾ ಸರ್ಕಾರದಲ್ಲೂ ಆಗಿವೆ. ಆದರೆ ಹತ್ಯೆಗಳಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz