ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಬ್ಬರ್, ಚಹಾ, ಅಡಿಕೆ&ಕಾಫಿ ಬೆಳೆಗಳನ್ನು ಹೊರತುಪಡಿಸಿ ತೋಟಗಾರಿಕೆ ಬೆಳೆಯುವ ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಯೋಜನೆ ಜಾರಿಯಲ್ಲಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ಪಡೆಯಲು ಅರ್ಹರಿದ್ದು, ಅದರ ಮೊದಲು 2 ಹೆಕ್ಟೇರ್ ಪ್ರದೇಶದವರೆಗೆ ಶೇ. 90% ಮತ್ತು 2 ಹೆಕ್ಟೇರ್ ಮೇಲ್ಪಟ್ಟು 3 ಹೆಕ್ಟೇರವರೆಗೆ ಶೇ.45% ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರನ್ನು ಹೊರತು ಪಡಿಸಿ, ಇತರೆ ರೈತರಿಗೆ 2 ಹೆಕ್ಟರ್ ಪ್ರದೇಶದವರೆಗೆ ಶೇ 75% ರಷ್ಟು ಮತ್ತು 2 ಹೆಕ್ಟೇರ್ ಮೇಲ್ಪಟ್ಟು 3 ಹೆಕ್ಟೇರವರೆಗೆ ಶೇ. 45% ಸಹಾಯಧನ ನೀಡಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಈಗಾಗಲೇ ಸಹಾಯಧನ ಪಡೆದು ಏಳು ವರ್ಷಗಳಾಗಿದ್ದಲ್ಲಿ ಪ್ರಸಕ್ತ ಸಾಲಿನಲ್ಲಿಯೂ ಕೂಡ ನಿಯಮಾನುಸಾರ ಸಹಾಯಧನ ನೀಡಲಾಗುವುದು. ತರಕಾರಿ ಮತ್ತು ಹೂ (ಕಡಿಮೆ ಅಂತರದ ಬೆಳೆಗಳಿಗೆ) ಎಲ್ಲ ವರ್ಗದರೈತರಿಗೆ ಗರಿಷ್ಠ 2 ಹೇಕ್ಟರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಸಂಬಂಧಿಸಿದಂತೆ ತಾಲೂಕು ಕಂದಾಯ ಇಲಾಖೆಯಿಂದ ನೀಡಲಾಗುವ ಇತ್ತೀಚಿನ ಗಣಕಿಕೃತ ಬೆಳೆ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. ತೋಟಗಾರಿಕೆ ಬೆಳೆಗಳಿಗೆ ಇಲಾಖೆಯಿಂದ ನೊಂದಾಯಿತ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಅಳವಡಿಸಿಕೊಳ್ಳಲು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಹನಿ ನೀರಾವರಿ ಅಳವಡಿಸುವ ಪೂರ್ವ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಹೆಸರು ನೊಂದಾಯಿಸಿ ಕಾರ್ಯದೇಶ ಪಡೆಯತಕ್ಕದ್ದು, ಅರ್ಜಿಗಳನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಸಂರ್ಪಕಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ಮಾಹಾಂತೇಶ ಮುರಗೋಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy