ಹುಬ್ಬಳ್ಳಿಯಲ್ಲಿ ನಡೆಯುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನಿತರರು ಸ್ವಾಗತ ಕೋರಿದರು.
ನಂತರ ವಿಮಾನ ನಿಲ್ದಾಣದಿಂದ ರಾಷ್ಟ್ರೀಯ ಯುವಜನೋತ್ಸವ ನಡೆಯುವ ರೈಲ್ವೆ ಮೈದಾನದವರೆಗೆ ರೋಡ್ ಶೋ ನಡೆಸಿದರು.
ರೋಡ್ ಶೋ ವೇಳೆ ರಸ್ತೆ ಇಕ್ಕೆಲೆಗಳಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಪ್ರಧಾನಿ ಮೋದಿ ಕೈಬೀಸಿದರು. ರಸ್ತೆಯುದ್ದಕ್ಕೂ ಅಭಿಮಾನಿಗಳು ಮೋದಿ ಅವರ ಕಾರಿಗೆ ಹೂಮಳೆಗರೆದು ಮೋದಿ ಅವರಿಗೆ ಜೈಕಾರ ಕೂಗಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


