ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿರುವ ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಚಿನ್ ಚೌಧರಿ ವಿರುದ್ಧ ಯುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಯುವ ಘಟಕದ ಮುಖಂಡ ಅಕ್ಷಿತ್ ಅಗರ್ವಾಲ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಪ್ರಧಾನಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಅಕ್ಷಿತ್ ಅಗರ್ವಾಲ್ ಹೇಳಿದ್ದಾರೆ. ನಿಂದನಾತ್ಮಕ ಹೇಳಿಕೆಗಳ ವಿಡಿಯೋ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಎಂದು ಅಕ್ಷಿತ್ ಅಗರ್ವಾಲ್ ಆರೋಪಿಸಿದ್ದಾರೆ. ಇವುಗಳನ್ನು ದೂರಿನ ಜತೆಗೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


