ಬೆಂಗಳೂರು: ಪ್ರದೇಶ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಇರಬೇಕಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಮ್ಮ ಪಕ್ಷದ ಹಿರಿಯ ನಾಯಕರು, ಅವರು ಹೇಳಿರುವುದರಲ್ಲಿ ತಪ್ಪು ಹುಡುಕಬಾರದು. ಸತೀಶ್ ಜಾರಕಿಹೋಳಿ ಅಭಿಪ್ರಾಯಕ್ಕೆ ನನ್ನ ಸಂಪೂರ್ಣ ಸಹಮತ ಇದೆ ಎಂದು ರಾಜಣ್ಣ ಹೇಳಿದರು.
ಪ್ರದೇಶ್ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆಂದು ಪಕ್ಷದ ಹೈಕಮಾಂಡ್ ಹೇಳಿದರೆ ಒಪ್ಪುತ್ತೇವೆ ಎಂದು ಕೆ.ಎನ್.ರಾಜಣ್ಣ ಹೇಳಿದರು.
ಯಾರಿಗಾದರೂ ಅಧ್ಯಕ್ಷ ಸ್ಥಾನ ಕೊಡಲಿ ನಮ ಅಭ್ಯಂತರವಿಲ್ಲ. ಪೂರ್ಣ ಪ್ರಮಾಣದ ಅಧ್ಯಕ್ಷರಾದರೆ ಸರಿ ಆಗುತ್ತದೆ. ಲೋಕಸಭಾ ಚುನಾವಣೆ ನಡೆದು 6 ತಿಂಗಳು ಆಗಿದೆ. ಹೈಕಮಾಂಡ್ ನಾಯಕರೇ ಗೊಂದಲ ಮಾಡಿದ್ದು, ಅವರೇ ನಿವಾರಣೆ ಮಾಡಬೇಕು ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx