ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಕೃಷಿ ಇಲಾಖೆಯ ಜಲಾನಯನ ಅಭಿವೃದ್ಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕೃಷಿ ಸಚಿವ ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯೂರು ತಾಲ್ಲೂಕಿನಲ್ಲಿ ಜಲಾನಯನ ಅಭಿವೃದ್ಧಿಗೆ ಖಂಡೇನಹಳ್ಳಿ ಮತ್ತು ಪಿಡಿ ಕೋಟೆ, ಹೊಳಲ್ಕೆರೆ ತಾಲ್ಲೂಕಿನಲ್ಲಿ ಗುಂಡೇರಿ ಮತ್ತು ಶಿವಗಂಗಾ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಎಂದು ತಿಳಿಸಿದರು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಾಜ್ಯಕ್ಕೆ 600 ಕೋಟಿ ಅನುದಾನ ನೀಡಲಾಗಿದೆ. ಇದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿಗೆ ನಮ್ಮ ಇಲಾಖೆಯು ನೀಡಿರುವ ಕೊಡುಗೆ. ವಿವಿಸಾಗರಕ್ಕೆ ಹೆಚ್ಚಿನ ನೀರು ಮೀಸಲಿಡುವ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇನೆ ಎಂದು ಇದೇ ವೇಳೆ ಅವರು ತಿಳಿಸಿದರು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಾಜ್ಯಕ್ಕೆ 600 ಕೋಟಿ ಅನುದಾನ ದೊರೆಯಲಿದ್ದು, ಮುಂದಿನ ಐದು ವರ್ಷಗಳಲ್ಲಿ ರಾಜ್ಯದ 57 ತಾಲ್ಲೂಕುಗಳ 5,240 ಹೆಕ್ಟೇರ್ ಅಭಿವೃದ್ಧಿ ಪಡಿಸಲಾಗುವುದು ಎಂಬುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕಿ ಕೆ . ಪೂರ್ಣಿಮಾ ಶ್ರೀನಿವಾಸ್ ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ನಗರಸಭಾ ಅಧ್ಯಕ್ಷೆ ಶಂಷುನ್ನೀಸಾ, ಸ್ಥಾಯಿಸಮಿತಿ ಅಧ್ಯಕ್ಷ ಅಜಯ್ ಕುಮಾರ್, ಪ್ರವರ್ಗ-1ರ ರಾಜ್ಯಾಧ್ಯಕ್ಷ ಡಿ.ಟಿ.ಶ್ರೀನಿವಾಸ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಕುಮಾರ್, ಅಧಿಕಾರಿಗಳಾದ ಉಲ್ಫತ್ ಜೈಬಾ, ಉಷಾರಾಣಿ, ನಗರಸಭೆ ಸದಸ್ಯರಾದ ಎಂ.ಡಿ.ಸಣ್ಣಪ್ಪ, ಬಾಲಕೃಷ್ಣ, ಜಗದೀಶ್, ಇತರರು ಹಾಗೂ ಎಲ್ಲಾ ಕಾಲೇಜಿನ ಶಿಕ್ಷಕ ವರ್ಗದವರು ಹಾಗೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


