ಅಲ್ಲೂರಿ ಸೀತಾರಾಮ ರಾಜು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಯವರ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಸಂಭವಿಸಬಹುದಾದ ಭಾರೀ ದುರಂತವೊಂದು ತಪ್ಪಿದೆ.
ಪಂಜಾಬ್‌ನಲ್ಲಿ ನಡೆದಿದ್ದ ಭದ್ರತಾ ಲೋಪದ ಬಳಿಕ ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದಂದು ಪ್ರತಿಮೆ ಅನಾವರಣ ಮಾಡಲು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಆದರೆ ಪ್ರಧಾನಿ ಭೇಟಿಗೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭಲ್ಲಿ ಕಪ್ಪು ಬಲೂನ್‍ಗಳನ್ನು ಹಾರಿ ಬಿಡಲಾಗಿತ್ತು.
ಬಲೂನ್‌ಗಳು ಎಲ್ಲವೂ ಆಕಾಶದಲ್ಲಿ ಹಾರುತ್ತಿದ್ದವು. ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಸಿ ಹೊರಡಬೇಕು ಎಂದು ಹೆಲಿಕಾಪ್ಟರ್ ಹತ್ತಿದ್ದಾರೆ. ಆದರೆ ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆ ಪ್ರತಿಭಟನಾಕಾರರು ಹಾರಿಬಿಟ್ಟ ಬಲೂನ್ ಅಡ್ಡಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲೆಟ್ ಬಹುದೊಡ್ಡ ಅಪಾಯ ತಪ್ಪಿಸಿದ್ದಾರೆ.
ಪ್ರತಿಭಟನೆ ವೇಳೆ ಬಲೂನ್ ಹಾರಿಬಿಟ್ಟು ಸಮಸ್ಯೆ ಸೃಷ್ಟಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಕಂಡುಬರುತ್ತಿರುವುದು.
ವರದಿ: ಆಂಟೋನಿ, ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB