ಬೀದರ್: ಔರಾದ್ (ಬಾ) ತಾಲೂಕಿನ ಸಂತಪೂರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾ ಸೇವಾ’ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ವತಿಯಿಂದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು.
ಸಂತಪೂರ ಹಾಗೂ ಸುತ್ತಮುತ್ತಲಿನ ಸುಮಾರು 35 ಗ್ರಾಮಗಳ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೂಡಲೇ ಸರ್ಕಾರಿ ಪಿಯುಸಿ ಹಾಗೂ ಪದವಿ ಕಾಲೇಜುಗಳನ್ನು ಮಂಜೂರು ಮಾಡಬೇಕು. ಪ್ರಸ್ತುತ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ದೂರದ ಬೀದರ್ ನಗರಕ್ಕೆ ಅಲೆಯುವಂತಾಗಿದೆ.
ಸಂತಪೂರದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಕೊರತೆಯಿಂದಾಗಿ ಗರ್ಭಿಣಿಯರು ಹಾಗೂ ಗ್ರಾಮೀಣ ಭಾಗದ ಮಹಿಳೆಯರು ತುರ್ತು ಚಿಕಿತ್ಸೆಗೆ ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ವೈದ್ಯರನ್ನು ನೇಮಿಸಬೇಕು.
ಬೀದರ್ ಸಹಾಯಕ ಆಯುಕ್ತರಾದ ಮೊಹಮ್ಮದ್ ಶಕೀಲ್ (KAS), ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಕಿರಣ್ ಪಾಟೀಲ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಈ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಡಿಎಸ್ ಎಸ್ (ಭೀಮಮಾರ್ಗ) ತಾಲೂಕು ಸಂಚಾಲಕರಾದ ತುಕಾರಾಮ ಹಸನ್ಮುಖಿ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
