ಕೊರಟಗೆರೆ : ಸಾರ್ವಜನಿಕರ ಕುಂದು–ಕೊರತೆಗಳನ್ನು ಆಲಿಸಿ, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ನವೆಂಬರ್ 7ರ ಶನಿವಾರ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ.
ಉಪ ಮುಖ್ಯಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಸಾರ್ವಜನಿಕರು ತಮ್ಮ ಗ್ರಾಮಗಳ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಕಂದಾಯ, ಕೃಷಿ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಸಾರ್ವಜನಿಕರ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದು, ಸ್ಥಳದಲ್ಲಿಯೇ ಸಾಧ್ಯವಾದಷ್ಟು ಪರಿಹಾರ ಕಲ್ಪಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ.
ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಹಶೀಲ್ದಾರ್ ಶರತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
