ಇಂದು ತುಮಕೂರು ನಗರದ ಗಾಜಿನ ಮನೆಯಲ್ಲಿ ಕಾಂಗ್ರೆಸ್ ಪಕ್ಷದ “ಪ್ರಜಾ ಧ್ವನಿ”ಯಾತ್ರೆಯ ಬೃಹತ್ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು ಭಾಗವಹಿಸುವ ಮೂಲಕ ಯಾತ್ರೆಗೆ ಇನ್ನಷ್ಟು ಮೆರುಗು ತಂದರು.
ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ, ಎ.ಐ.ಸಿ.ಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಮಯೂರ್ ಜಯಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ , ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಧುಗಿರಿ ಜನಪ್ರಿಯ ಮಾಜಿ ಶಾಸಕರು ಆದ ಕೆ.ಎನ್.ರಾಜಣ್ಣ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಆಂಜನೇಯ, ವೆಂಕಟರವಣಪ್ಪ, ಯು.ಟಿ.ಖಾದರ್ , ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಮಾ.ವಿ.ಸ ವಿ.ಎಸ್.ಉಗ್ರಪ್ಪನವರು,ಶಾಸಕ ರಂಗನಾಥ್ ಮೊದಲಾದವರು ಮಾತನಾಡಿದರು.
ಮಾಜಿ ಶಾಸಕರುಗಳಾದ ಕೆ.ಷಡಕ್ಷರಿ, ಷಫಿ ಅಹ್ಮದ್, ರಫೀಕ್ ಅಹ್ಮದ್, ಮಾಜಿ ವಿ.ಪ.ಸದಸ್ಯ ಬೆಮಲ್ ಕಾಂತರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ್ ನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಸೇರಿದಂತೆ ಅನೇಕ ಗಣ್ಯರು, ಮುಖಂಡರು ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1