ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನಾ ಪಕ್ಷದ ಚಿಹ್ನೆ ಮತ್ತು ಹೆಸರನ್ನು ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ನಿಂತು ಪ್ರಜಾಪ್ರಭುತ್ವ ಮೃತಪಟ್ಟಿದೆ ಎಂದು ಘೋಷಿಸಬಹುದು ಎಂದು ಉದ್ದವ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಂಧೆ ಅವರು ಬಂಡಾಯವೆದ್ದು ಬಿಜೆಪಿ ಜತೆ ಕೈಜೋಡಿಸಿದ ಸುಮಾರು 8 ತಿಂಗಳ ನಂತರ ಚುನಾವಣಾ ಆಯೋಗ ಪಕ್ಷದ ಹೆಸರು ಮತ್ತು ಚಿಹ್ನೆಗೆ ಸಂಬಂಧಿಸಿದ ನಿರ್ಧಾರವನ್ನು ಶುಕ್ರವಾರ ಪ್ರಕಟಿಸಿತ್ತು. ಅವರು ಶಿವಸೇನಾ ಚಿಹ್ನೆಯನ್ನು ಕಳವು ಮಾಡಿದ್ದಾರೆ. ನಾವು ಭರವಸೆ ಕಳೆದುಕೊಳ್ಳುವುದಿಲ್ಲ. ಹೋರಾಟ ಮುಂದುವರಿಸಲಿದ್ದೇವೆ ಎಂದರು.
ಕೇಂದ್ರ ಚುನಾವಣಾ ಆಯೋಗ ‘ಶಿವಸೇನಾ’ ಎಂಬ ಹೆಸರು ಮತ್ತು ಪಕ್ಷದ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂಧೆ ಬಣಕ್ಕೆ ನೀಡಿತ್ತು. ಉದ್ಧವ್ ಠಾಕ್ರೆ ಬಣವು ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎಂದು ಗುರುತಿಸಿಕೊಳ್ಳಬಹುದು ಎಂಬುದಾಗಿ ಸೂಚಿಸಿತ್ತು. ಈ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಠಾಕ್ರೆ ಟೀಕಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


