ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೋಲಾಹಲ ಸೃಷ್ಟಿಸಿದ ಘಟನೆಯಲ್ಲಿ ಹೆಚ್.ಡಿ. ರೇವಣ್ಣ ಬಂಧನವಾಗಿದೆ. ಇದರ ಬೆನ್ನಲ್ಲೇ ಮಗ ಪ್ರಜ್ವಲ್ ಕೂಡ ಶರಣಾಗಲು ರೆಡಿಯಾಗಿದ್ದಾರೆ ಎನ್ನಲಾಗಿದೆ.
ಅಪ್ಪನ ಅರೆಸ್ಟ್ ಬೆನ್ನಲ್ಲೇ ದುಬೈ ನಲ್ಲಿರುವ ಪ್ರಜ್ವಲ್ ರೇವಣ್ಣ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಇದೆ. ಇತ್ತ ಎಸ್ಐಟಿ(SIT) ತಂಡ ವಿಮಾನ ನಿಲ್ದಾಣದಲ್ಲೇ ಬಂಧಿಸಲು ತಯಾರಿ ನಡೆಸಿದೆ. ಹೆಚ್.ಡಿ. ರೇವಣ್ಣ ಬಂಧನವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕುಸಿದು ಹೋಗಿದ್ದು, ಇನ್ನು ಹೆಚ್ಚು ಸತಾಯಿಸಿದರೆ ಉಳಿಗಾಲವಿಲ್ಲ ಎಂದು ಸರೆಂಡರ್ ಆಗುವ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.
ವೀಡಿಯೋ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಸಂಕಷ್ಟಗಳು ಹೆಚ್ಚಾಗುತ್ತಿದೆ. ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿ ಕೂಡ ವಜಾ ಆಗಿದ್ದು, ಬಚಾವ್ ಆಗುವ ದಾರಿಗಳು ಸದ್ಯಕ್ಕೆ ಮುಚ್ಚಿದ್ದು, ಸರೆಂಡರ್ ಆಗುವ ಮಾರ್ಗವೊಂದೇ ಉಳಿದಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA