ಬೆಂಗಳೂರು: ಹಾಸನದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳಡಿ ಸಿಲುಕಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಸಂಸದ ಹಾಗೂ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ಅನ್ನು ಕೂಡಲೇ ರದ್ದುಪಡಿಸಿ, ದೇಶಕ್ಕೆ ಕರೆತರಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರವನ್ನು ಒದಗಿಸಿಕೊಡಲು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈಗಾಗಲೇ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ( SIT) ಕೂಡ ತನಿಖೆ ಕೈಗೊಂಡಿದ್ದು. ನಿಮಗೆ ತನಿಖೆಯ ಅಗತ್ಯ ಮಾಹಿತಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
ನರೇಂದ್ರ ಮೋದಿ ಅವರೇ ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರು ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಿಲುಕಿರುವುದು ನಿಮ್ಮ ಗಮನಕ್ಕೆ ಬಂದಿರಬಹುದು. ಅವರು ಹಾಲಿ ಹಾಸನದ ಸಂಸದ ಹಾಗೂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯೂ ಹೌದು.
ಪ್ರಜ್ವಲ್ ರೇವಣ್ಣ ಅವರು ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕ ದೌರ್ಜನ್ಯ ಎಸಗಿರುವ ರೀತಿ ನಿಜಕ್ಕೂ ಭೀಕರ ಹಾಗೂ ಅಸಹ್ಯಕರವಾಗಿದೆ. ಇದು ಭಾರತದ ಆತ್ಮಸಾಕ್ಷಿಯನ್ನೇ ಪ್ರಶ್ನಿಸುವಂತಹ ಘಟನೆಯಾಗಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA