nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತೆಯರ ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು
    ರಾಜ್ಯ ಸುದ್ದಿ May 7, 2024

    ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತೆಯರ ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

    By adminMay 7, 2024No Comments1 Min Read
    f i r

    ಅಶ್ಲೀಲ ವಿಡಿಯೋಗಳನ್ನು ವಾಟ್ಸ್‌ಆ್ಯಪ್ ಅಥವಾ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಸನ ಪೆನ್ ಡ್ರೈವ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಎಚ್ಚರಿಕೆ ನೀಡಿದೆ. ಹಾಸನದಲ್ಲಿ ನಡೆದಿದೆ ಎನ್ನಲಾದ ಕೆಲವು ಅಶ್ಲೀಲ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗಿವೆ. ವಾಟ್ಸ್‌ಆ್ಯಪ್ ಮೂಲಕ ಒಬ್ಬರಿಂದ ಒಬ್ಬರಿಗೆ ಶೇರ್ ಆಗುತ್ತಿದೆ.‌

    ಇದರಿಂದ ಸಂತ್ರಸ್ತೆಯರ ಘನತೆ ಹಾಗೂ ಗೌರವಕ್ಕೆ ಚ್ಯುತಿಯಾಗುತ್ತಿದೆ. ಹೀಗಾಗಿ ಉದ್ದೇಶಪೂರ್ವವಾಗಿ ವಾಟ್ಸ್‌ಆ್ಯಪ್ ಸೇರಿ‌ ಇನ್ನಿತರ ಆ್ಯಪ್ ಗಳ ಮುಖಾಂತರ ವೀಡಿಯೋ ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 69 (ಎ) ಹಾಗೂ 228 (ಎ) 1, 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಐಟಿ ಪ್ರಕಟಣೆಯಲ್ಲಿ ತಿಳಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರಿಗೆ ಕಾನೂನು ನೆರವು ನೀಡಲು ಈಗಾಗಲೇ ಎಸ್ಐಟಿ ಸಹಾಯವಾಣಿ ಆರಂಭಿಸಿದೆ.

    ಬೆಳಗ್ಗೆ 8ರಿಂದ ರಾತ್ರಿ 8ವರೆಗೆ ಕರೆ ಮಾಡಿ ಮಾತನಾಡಬಹುದು. ಸಂತ್ರಸ್ತೆಯರ ಹೆಸರು, ವಿಳಾಸ ಸೇರಿದಂತೆ ಇನ್ನಿತರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡ ತಿಳಿಸಿದೆ‌‌‌.‌ ಈ ಬೆನ್ನಲ್ಲೇ ಕೆಲವು ಮಹಿಳೆಯರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಹಿಳೆಯರ ಹೆಸರು ಹಾಗೂ ವಿಳಾಸ ನಮೂದಿಸಿಕೊಂಡಿರುವ ಎಸ್ಐಟಿ ತದನಂತರ ಅವರನ್ನು ಸಂಪರ್ಕಿಸಿ ದೌರ್ಜನ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ. ಹೀಗೆ ಬರುವ ಕರೆಗಳು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರದ್ದೇ? ಎಂಬುದರ ಬಗ್ಗೆ ನೈಜ ಪರಿಶೀಲನೆ ನಡೆಯಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಕೊರಟಗೆರೆ ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ 8,589 ಮಂದಿ ಫಲಾನುಭವಿಗಳಿಗೆ…

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.