ಬೆಂಗಳೂರು: ಒಂದೆಡೆ ಲುಕೌಟ್ ನೋಟಿಸ್ ಮತ್ತೊಂದೆಡೆ ಅತ್ಯಾಚಾರ ಕೇಸ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ಮತ್ತೆ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಕೊನೆಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ 164 ಅಡಿಯಲ್ಲಿ ಕೊಟ್ಟ ಹೇಳಿಕೆ ಆಧರಿಸಿ ಎಫ್‍ಐಆರ್ ದಾಖಲಿಸಿದ್ದಾರೆ.
ಈಗಾಗಲೇ ಪ್ರಜ್ವಲ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಎಲ್ಲೇ ಕಾಣಿಸಿಕೊಂಡರೂ ಅರೆಸ್ಟ್ ಆಗುವುದು ಖಚಿತವಾಗಿದೆ. ಇತ್ತ ಪ್ರಜ್ವಲ್ ರೇವಣ್ಣ ಕೂಡ ಕಾನೂನು ಸಮರ ಸಾಧ್ಯತೆ ಇದೆ. ಜೊತೆಗೆ ಇದೀಗ ಎಸ್ ಐಟಿ ಅಧಿಕಾರಿಗಳು ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ಇಂದು ಮತ್ತೆ ನೋಟಿಸ್ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


