ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ SPP ರಾಜಿನಾಮೆ ನೀಡಿದ್ದಾರೆ. ಪ್ರಜ್ವಲ್ ರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್ನಲ್ಲಿ ವಾದಿಸಲು ರಾಜ್ಯ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್ ಪಿಪಿಯಾಗಿ ನೇಮಕ ಮಾಡಿತ್ತು. ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಇದೀಗ ಜಾಯ್ನಾ ಕೊಥಾರಿ ಅವರು ಇಂದು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಆಗಿ ಬಿಎನ್ ಜಗದೀಶ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಬಳಿಕ ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್‌ನ್ನು ಸಮರ್ಥಿಸಲು ರಾಜ್ಯ ಸರ್ಕಾರವು, ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿತ್ತು. ಇದರ ಬೆನ್ನಲ್ಲೇ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


