ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ದಿನದಿಂದ ದಿನಕ್ಕೆ ಭಯಾನಕ ಸತ್ಯಗಳು ಬಯಲಾಗುತ್ತಿವೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪೋಟಕ ಸತ್ಯ ಹೊರಹಾಕಿದ್ದು ಪ್ರಜ್ವಲ್ ರೇವಣ್ಣ ಅಧಿಕಾರ ದುರುಪಯೋಗ ಮಾಡಿಕೊಂಡು 16ರಿಂದ 50 ವರ್ಷ ವಯಸ್ಸಿನ 300ಕ್ಕೂ ಅಧಿಕ ಮಹಿಳೆಯರ ಮೇಲೆ ನೀಚ ಕೃತ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆ ಇದು. ಇದು ದೇಶದಲ್ಲೇ ಅತೀ ದೊಡ್ಡ ಅತ್ಯಾಚಾರ ಹಗರಣ. ಪ್ರಜ್ವಲ ರೇವಣ್ಣ ಸಂಸದರಾಗಿದ್ದು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಧಿಕಾರ ದರ್ಪ, ಆಸೆ ಆಮಿಷ ತೋರಿಸಿ ನೂರಾರು ಮಹಿಳೆಯರನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಡಿಯೋ ನೋಡಿದ್ರೆ ಮಹಿಳೆಯರ ಜೀವಂತ ಕೊಲೆ ಆಗಿದೆ ಅನಿಸುತ್ತದೆ. ವಿಡಿಯೋ ಶೇರ್ ಮಾಡಲು ಹೋಗಬೇಡಿ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತದೆ ಎಂದು ಮನವಿ ಮಾಡಿದ್ದಾರೆ.
ಜೊತೆಗೆ ನಮ್ಮ ಇಲಾಖೆಯೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಇಂಟರ್ ಪೋಲ್ ಬಳಸಿ ಆರೋಪಿ ಪ್ರಜ್ವಲ್ ನನ್ನು ಅರೆಸ್ಟ್ ಮಾಡಿ ಎಂದು ಕೇಂದ್ರಕ್ಕೆ ಹೆಬ್ಬಾಳ್ಕರ್ ಆಗ್ರಹ ಮಾಡಿದ್ದಾರೆ. ಜೊತೆಗೆ ಮೋದಿ ಸೇರಿ ಅನೇಕ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296