ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಪರಾರಿಯಾಗಿದ್ದ ಗೋಪಾಲ್ ಜೋಶಿಯನ್ನು ಕೊಲ್ಲಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ.
ಕರ್ನಾಟಕದಿಂದ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ 5:30ಕ್ಕೆ ಲಾಡ್ಜ್ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296