ಧಾರವಾಡ : ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಪುತ್ತೂರು ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದು, ಮುತಾಲಿಕ್ ರ ಮನೆಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ.
ಮುಸ್ಲಿಂ ಪ್ರತ್ಯೇಕ ಕಾಲೇಜು ಸ್ಥಾಪನೆ ವಿರೋಧಿಸಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ವಾಟ್ಸಪ್ ಮೂಲಕ ಪುನೀತ್ ಕೆರೆಹಳ್ಳಿ ಸೇರಿ ಹಲವರ ಹೆಸರು ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿದ್ದಾನೆ.
ಮೊಹಮ್ಮದ್ ಆಸೀಫ್ ಹೆಸರಿನ ಸಿಮ್ ಕಾರ್ಡ್ ನಿಂದ ಜೀವ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಕರೆ ಹಿನ್ನೆಲೆ ಮುತಾಲಿಕ್ ಅವರ ಧಾರವಾಡದ ಮನೆಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


