ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಡಿಸಿಎಂ ಜಿ. ಪರಮೇಶ್ವರ್ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನಲ್ಲಿ ಭಾರಿ ಬಂಡಾಯಕ್ಕೆ ಕಾರಣವಾಗುತ್ತಿದೆ. ಡಿ.ಕೆ ಶಿವಕುಮಾರ್ ನಡೆಗೆ ಬೇಸತ್ತು ರಾಜಿನಾಮೆ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಚುನಾವಣೆ ಕಾವು ಹೆಚ್ಚಿರುವಾಗಲೆ ಪರಮೇಶ್ವರ್ ರಾಜಿನಾಮೆ ವಿರೋಧ ಪಕ್ಷಗಳಿಗೆ ರಾಜಕೀಯ ಅಸ್ತ್ರವಾಗಲಿದ್ದು ಕಾಂಗ್ರೆಸ್ ದಲ್ಲಿ ಬೀತಿ ಶುರುವಾಗಿದೆ.
ತಮ್ಮೊಡನೆ ಚರ್ಚೆ ನಡೆಸದೆ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸದ ವೇಳೆ ತಾವೇ ತೀರ್ಮಾನ ಮಾಡಿ ಉಚಿತ ಘೋಷಣೆಗಳನ್ನು ಮಾಡುತ್ತಿದ್ದಾರೆ ಎಂಬ ಬೇಸರದಿಂದ ರಾಜಿನಾಮೆ ನೀಡುತ್ತಿರುವುದಾಗಿ ತಮ್ಮ ಆಪ್ತರ ಬಳಿ ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅವರನ್ನು ಸಮಾಧಾನಪಡಿಸಲು ಉಸ್ತುವಾರಿ ರಣದೀಪ್ ಸುರ್ಜೇವಾಲಾ ಧಾವಿಸಿದ್ದಾರೆ ಎನ್ನಲಾಗಿದ್ದು. ಪ್ರಜಾಧ್ವನಿ ಕಾರ್ಯಕ್ರಮದ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆಯಲಿದ್ದು,ನಾಳಿನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸುರ್ಜೇವಾಲ, ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


