nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ

    November 24, 2025

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025
    Facebook Twitter Instagram
    ಟ್ರೆಂಡಿಂಗ್
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    • 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ: ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ
    ತುಮಕೂರು January 5, 2025

    ತುಮಕೂರು ವಿವಿ: ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ

    By adminJanuary 5, 2025No Comments2 Mins Read
    prasannananda swamiji

    ತುಮಕೂರು:ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್‌ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್‌  ಈ ವೇಳೆ ಉಪಸ್ಥಿತರಿದ್ದರು.

    ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್‌ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ.


    Provided by
    Provided by

    ಗೌರವಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು.

    ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು ಶಾಲಾ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮನಸ್ಸು ಧಾರ್ಮಿಕತೆಯ ಕಡೆ ಸೆಳೆಯಲ್ಪಟ್ಟು ಸನ್ಯಾಸದ ಮೂಲಕ ಪಾರಮಾರ್ಥಿಕ ಜೀವನಕೈಗೊಂಡರು.  ಹಿಂದುಳಿದ ಸಮುದಾಯಗಳ ಏಳ್ಗೆಗಾಗಿ ಹಗಲಿರುಳು ದುಡಿಯುತ್ತಿದ್ದು, ಹದಿನಾರು ದಿನಗಳ ಕಾಲ ರಾಜನಹಳ್ಳಿಯಿಂದ ರಾಜಧಾನಿಯವರೆಗೆ ಸುಮಾರು ನಾಲ್ಕುನೂರು ಕಿ.ಮೀ.ಗಳ ಬೃಹತ್ ಪಾದಯಾತ್ರೆಯನ್ನುಕೈಗೊಂಡು ಕೆಳಸಮುದಾಯಗಳ ಅಳಲನ್ನು ಸರಕಾರದ ಮುಂದೆ ಸಮರ್ಥವಾಗಿ ಮಂಡಿಸಿ ತಮ್ಮ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.

    ಸಾಹಿತ್ಯ ಮತ್ತು ವಿವಿಧ ಲಲಿತ ಕಲೆಗಳಲ್ಲಿ ಅಭಿರುಚಿ ಹೊಂದಿರುವ ಇವರು, ವಿದ್ವತ್ ಪೂರ್ಣ ಬರಹಗಳನ್ನೊಳಗೊಂಡ ‘ವಾಲ್ಮೀಕಿ ವಿಜಯ ಸ್ಮರಣ ಸಂಪುಟ’ವೆಂಬ ಗ್ರಂಥ ರಚನೆಗೆತಮ್ಮ ವಿಶಿಷ್ಟವಾದ ಕೊಡುಗೆಯನ್ನು ನೀಡಿದ್ದಾರೆ. ತಳ ಸಮುದಾಯಗಳ ಹಾಗೂ ನಾಯಕ ಜನಾಂಗದ ಇತಿಹಾಸ, ಸಾಹಿತ್ಯ, ಸಮಾಜ ಮತ್ತು ಧಾರ್ಮಿಕತೆಗಳ ಕುರಿತ ವಿದ್ವತ್ತನ್ನು ತಮ್ಮಆಧ್ಯಾತ್ಮಿಕ ವ್ಯಕ್ತಿತ್ವದ ಭಾಗವಾಗಿಸಿಕೊಂಡಿರುವ ಅಧ್ಯಯನಶೀಲರು. ಸ್ವಾಮೀಜಿಯವರ ನಿರಂತರ ಸೇವೆ ಮತ್ತು ಸಾಧನೆಗಳನ್ನು ಗುರುತಿಸಿ, ರಾಜ್ಯ ಮತ್ತು ರಾಷ್ಟ್ರಮಟ್ಟದ ವಿವಿಧ ಸಂಘ ಸಂಸ್ಥೆಗಳು ಶ್ರೀಗಳಿಗೆ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಈ ಸಾಧನೆಗಳನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾನಿಲಯವುಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿತು.

    ತುಮಕೂರು ವಿವಿಯ ಅಕಾಡೆಮಿಕ್, ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್‌ಸದಸ್ಯರು, ವಿವಿಧ ನಿಕಾಯಗಳ ಡೀನರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ

    November 24, 2025

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ

    November 24, 2025

    ತುಮಕೂರು: ನಗರದ ಶ್ರೀ ಸಿದ್ದಾರ್ಥ ಹೈಯರ್ ಎಜುಕೇಶನ್ ಅಕಾಡೆಮಿಯ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾ.ಇಂಪನಾ ಬಿ. ವರ್ಧನ್ ಅವರು ಅತ್ಯುತ್ತಮ…

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.