ಪಾವಗಡ: ಪಟ್ಟಣದ ಶ್ರೀ ಶನಿಮಹಾತ್ಮಾ ದೇವಸ್ಥಾನ ಹಿಂಭಾಗದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿ ಗೊಳಿಸಲು ಸರ್ಕಾರ ಚಿಂತನೆ ಮಾಡುವ ಅಗತ್ಯವಿದೆಯೆಂದು ಪಾವಗಡ ಮಾಜಿ ಪುರಸಭೆ ಅಧ್ಯಕ್ಷ ಮಾನಂ ವೆಂಕಟಸ್ವಾಮಿ ಅಭಿಪ್ರಾಯಪಟ್ಟರು.
ಪಾವಗಡ ಹೆಲ್ಪ್ ಸೊಸೈಟಿ ವತಿಯಿಂದ ಪಟ್ಟಣದ ಶ್ರೀ ಶನಿಮಹಾತ್ಮಾ ದೇವಸ್ಥಾನ ಹಿಂಭಾಗದ ತುಂಬಾ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡುವ ಸರಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಮಾತನಾಡಿ, ಪಟ್ಟಣದ ಮಧ್ಯ ಭಾಗದಲ್ಲಿ ಇರುವಂತ ಈ ಸರ್ಕಾರಿ ಶಾಲೆ 75 ನೇ ಸ್ವಾತಂತ್ರ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಇಂದುನ ದಿನಗಳಲ್ಲಿಯೂ ಸಹ ಹೆಂಚಿನ ಕೊಠಡಿಗಳಲ್ಲಿ ಪ್ರಾಣ ಭಯದಿಂದ ಬಡ ಮಕ್ಕಳು ಪಾಠ ಕೇಳುವಂತ ಶೋಚನಿಯ ಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬಿ.ಆರ್.ಸಿ. ಪವನ್ ಕುಮಾರ್ ರೆಡ್ಡಿ, ಸಿ.ಆರ್.ಪಿ. ಓಬಳಪ್ಪ, ಆಟೋ ಚಾಲಕರ ಸಂಘದ ಅಧ್ಯಕ್ಷ ನಾಗರಾಜ್, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಸಿಬ್ಬಂದಿ, ಅಡುಗೆ ಸಿಬ್ಬಂದಿ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz