ಬೆಳಗಾವಿ: ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ನಡೆಯುತ್ತಿದ್ದ ವೇಳೆ ಕಳ್ಳರು ಸುಮಾರು 25 ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿದ್ದಾರೆ.
ಸಮಾವೇಶದಲ್ಲಿ ಬಂದಿದ್ದವರ 25 ಮೊಬೈಲ್ ಫೋನ್ ಗಳನ್ನು ಕಳ್ಳರು ಎಗರಿಸಿದ್ದಾರೆ. ಮೊಬೈಲ್ ವಾಪಸ್ ನೀಡುವಂತೆ ಆಯೋಜಕರು ಮನವಿ ಮಾಡುತ್ತಿರುವುದು ಕಂಡು ಬಂದಿತ್ತು. ಆದರೆ ಕಳ್ಳರ ಪತ್ತೆಯೇ ಇಲ್ಲದಂತಾಗಿದೆ.
2 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿರುವ ವೇಳೆ ಗುಂಪಿನೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿದ್ದು, ಪ್ರತಿಭಟನಾಕಾರರ ಮೊಬೈಲ್ ಗಳನ್ನು ಕಳವು ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy