ನವದೆಹಲಿ: ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಿದ್ದಾರೆ.
ಈ ಮೂಲಕ ಇನ್ಸ್ಟಾಗ್ರಾಂನಲ್ಲಿ ಗರಿಷ್ಠ ಹಣ ಸಂಪಾದನೆ ಮಾಡುವ ವಿಶ್ವದ ಅಗ್ರ 15 ಸೆಲೆಬ್ರಿಟಿಗಳಲ್ಲಿ ಕೊಹ್ಲಿ ಒಬ್ಬರು ಎನ್ನಿಸಿದ್ದಾರೆ.ಕೊಹ್ಲಿ ಅವರು ಇನ್ಸ್ಟಾಗ್ರಾಂನಲ್ಲಿ 21 ಕೋಟಿಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ.
ಹೋಪರ್ ಎಚ್ಕ್ಯೂ ಬಿಡುಗಡೆ ಮಾಡಿರುವ ಅಂಕಿ& ಅಂಶಗಳ ಪ್ರಕಾರ, ಕ್ರಿಶ್ಚಿಯಾನೊ ರೊನಾಲ್ಡೊ ವಿಶ್ವದಲ್ಲೇ ಅಗ್ರಸ್ಥಾನದಲ್ಲಿದ್ದಾರೆ. ಅವರು ಪ್ರತಿ ಪ್ರಾಯೋಜಿತ ಪೋಸ್ಟ್ಗೆ 19.5 ಕೋಟಿ ರೂ. ಪಡೆಯುತ್ತಾರೆ. ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿರುವ ಅಗ್ರ ಭಾರತೀಯ ಕ್ರಿಕೆಟಿಗರಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy