nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ
    ರಾಜ್ಯ ಸುದ್ದಿ December 27, 2022

    ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ

    By adminDecember 27, 2022No Comments2 Mins Read
    arga janendra

    ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸೈಬರ್ ಕ್ರೈಂ ವಂಚನೆಗೊಳಗಾದವರ ನೆರವಿಗಾಗಿ ಸರ್ಕಾರವು ಬೆಂಗಳೂರು ನಗರದಲ್ಲಿ 8 ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ವಿಶೇಷ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆದು, ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಸೈಬರ್ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ಸೋಮವಾರ ವಿಧಾನ ಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪಿ.ಆರ್.ರಮೇಶ್ ಹಾಗೂ ಟಿ.ಎ.ಶರವಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.ರಾಜ್ಯದಲ್ಲಿ ಸೈಬರ್ ಅಪರಾಧ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಸೈಬರ್ ಸೆಲ್ ಆಧುನೀಕರಣಗೊಳಿಸಲಾಗಿದೆ. ಪೊಲೀಸರಿಗೆ ಆಧುನಿಕ ತರಬೇತಿ ನೀಡಲು ಸಿ.ಐ.ಡಿ ಘಟಕದಲ್ಲಿ ವಿಶೇಷ ತರಬೇತಿ ವಿಭಾಗವನ್ನು ಸ್ಥಾಪಿಸಲಾಗಿದೆ.


    Provided by
    Provided by

    ಒಟ್ಟು 3657 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ, ಸರ್ಕಾರಿ ಅಯೋಜಕರು, ಇನ್ನಿತರೆ ಕಾನೂನು ಜಾರಿ ಸಂಸ್ಥೆಗಳಿಗೆ ತರಬೇತಿ ನೀಡಲಾಗಿದೆ. ರಾಜ್ಯದ ಗೃಹ ಇಲಾಖೆ ಗುಜರಾತಿನ ಅಹಮದಬಾದ್ ವಿಧಿ ವಿಜ್ಞಾನ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅಲ್ಲಿ ರಾಜ್ಯದ ಆಸಕ್ತ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕೊಡಿಸಿ ನೇಮಕಾತಿ ಮಾಡಲಾಗಿದೆ.

    ಕೇಂದ್ರ ಸರ್ಕಾರ ಸೈಬರ್ ದೂರುಗಳನ್ನು ದಾಖಲಿಸಲು ನ್ಯಾಶನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ಸ್ಥಾಪಿಸಿದೆ. ಇದರಲ್ಲಿ ರಾಜ್ಯಕ್ಕೆ ಸಂಬಂಧಿಸಿದಂತೆ ಒಟ್ಟು 80,379 ದೂರುಗಳು ದಾಖಲಾಗಿವೆ. 53,229 ದೂರುಗಳು ಪರಿಶೀಲನಾ ಹಂತದಲ್ಲಿವೆ. 14,960 ದೂರುಗಳನ್ನು ಪರಿಶೀಲಿಸಿ ಮುಕ್ತಾಯಗೊಳಿಸಲಾಗಿದೆ. 901 ದೂರುಗಳು ತಿರಸ್ಕರಿಸಲ್ಪಟ್ಟಿವೆ. 5,734 ಪ್ರಕರಣಗಳ ವಿಚಾರಣೆ ಬಾಕಿಯಿದೆ. ಒಟ್ಟು 528 ಪ್ರಕರಣಗಲ್ಲಿ ಎಪ್.ಐ.ಆರ್. ದಾಖಲಿಸಲಾಗಿದೆ. 2,028 ಪ್ರಕರಣಳನ್ನು ದೂರುದಾರರು ಹಿಂಪಡೆದಿದ್ದಾರೆ.

    ಸಾರ್ವಜನಿಕರು ಸೈಬರ್ ವಂಚನೆಯಾದ ತಕ್ಷಣವೇ ದೂರು ದಾಖಲಿಸಬೇಕು. ಹಣದ ವಂಚನೆ ಕಂಡು ಬಂದ ಎರಡು ಗಂಟೆಗಳ ಒಳಗೆ ದೂರು ಸಲ್ಲಿಸಿದರೆ, ವಂಚನೆ ಮಾಡಿ ಹಣ ಪಡೆದುಕೊಂಡವರ ಬ್ಯಾಂಕ್ ಖಾತೆಯನ್ನು ನಿಷ್ಕ್ರಿಯಗೊಳಿಸಿ ಹಣದ ವಂಚನೆಯಾಗುವುದನ್ನು ತಡೆಯಲಾಗುವುದು. ಈ ರೀತಿಯಲ್ಲಿ ರೂ.70 ಕೋಟಿಗೂ ಅಧಿಕ ಮೊತ್ತದ ಹಣ ವಂಚನೆಗೆ ಒಳಗಾಗುವುದನ್ನು ತಡೆಹಿಡಿಯಲಾಗಿದೆ. ಇಂದು ಸೈಬರ್ ಅಪರಾಧಗಳ ಸ್ವರೂಪ ಬದಲಾಗಿದೆ. ಇದಕ್ಕೆ ತಕ್ಕಹಾಗೆ ಕಾನೂನುಗಳನ್ನು ರೂಪಿಸುವುದು ಅಗತ್ಯವಾಗಿದೆ.

    ಜಾಲತಾಣಗಳಲ್ಲಿ ಅಶ್ಲೀಲ ವಿಷಯಗಳು ಪ್ರಸಾರವಾಗುತ್ತಿರುವುದು ಹಾಗೂ ಇವು ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಾಗಿದೆ ಸಾಮಾಜಿಕ ಜಾಲತಾಣ ಹಾಗೂ ಅಂತರ್ಜಾಲದಲ್ಲಿ ಪೊಸ್ಟ್ ಮಾಡುವ ವ್ಯಕ್ತಿಗಳನ್ನುಗುರುತಿಸಿ ತೆರವುಗೊಳಿಸುವ ಕಾರ್ಯವನ್ನು ಸೈಬರ್ ಕ್ರೈಂ ಪೊಲೀಸರು ನಿರ್ವಹಿಸುತ್ತಿದ್ದಾರೆ.

    ಅಶ್ಲೀಲ ವಿಷಯ ಹಾಗೂ ವಿಡಿಯೋಗಳನ್ನು ಪೊಸ್ಟ್ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಮಾಹಿತಿ ತಂತ್ರಜ್ಞಾನ ಕಾಯ್ದೆ, ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ. ಕೆಟ್ಟ ಪರಿಣಾಮ ಬೀರುವ ಪೋಸ್ಟ್ ಗಳಿಗೆ ಸಂಬಂಧಪಟ್ಟ ಜಾಲತಾಣದಿಂದ ಹಾಗೂ ಸಾರ್ವಜನಿಕರ ವೀಕ್ಷಣೆಯಿಂದ ತೆಗೆದು ಹಾಕಲು ಸಂಬಂಧಪಟ್ಟ ಜಾಲತಾಣದ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಲಾಗುತ್ತಿದೆ.

    ಅಶ್ಲೀಲ ದೃಶ್ಯಗಳು, ಸಮಾಜಘಾತುಕ ವಿಷಯಗಳ ಕುರಿತು ದೂರು ಸಲ್ಲಿಸಲು ಪ್ರತಿ ಜಿಲ್ಲೆ ಹಾಗೂ ನಗರಗಳಲ್ಲಿ ಕುಂದುಕೊರತೆ ವಿಭಾಗಗಳನ್ನು ಸ್ಥಾಪಿಸಲಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳು ಹಾಗೂ ಯುವಕ ಯುವತಿಯರಿಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ. ಇದಕ್ಕೆ ಶಿಕ್ಷಕರು, ಪೋಷಕರ ಸಹಕಾರದ ಅಗತ್ಯವಿದೆ ಎಂದರು.

    ಹಿಂದೂ  ಸಂಸ್ಕೃತಿಯೂ ನಾಶವಾಗುತ್ತಿದೆ. ದುಷ್ಟ ಹಾಗೂ ಬಾಹ್ಯ ಶಕ್ತಿಗಳು ವ್ಯವಸ್ಥಿತವಾಗಿ ದೇಶದ ಯುವಜನರನ್ನು ಇದರ ದಾಸರನ್ನಾಗಿ ಮಾಡುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾಜಿಕ ಜಾಲತಾಣ ಹಾಗೂ ವೆಬ್‍ಸೈಟ್‍ಗಳಲ್ಲಿನ ಕಾಮೋತ್ತೇಜಕ ದೃಶ್ಯಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಶಾಸಕ ಟಿ.ಎ.ಶರವಣ ಮಾತನಾಡಿ ಸೈಬರ್ ಮೂಲಕ ರಾಜ್ಯದಲ್ಲಿ ರೂ.120 ಕೋಟಿಗೂ ಅಧಿಕ ವಂಚನೆ ಎಸಗಲಾಗಿದೆ ಈ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.