ಬೆಂಗಳೂರು : ಬಿಜೆಪಿ ಪ್ರತಿ ಮತದಾರರಿಗೆ 6000 ರೂ ಹಣ ನೀಡಲಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ಧಾಳಿ ನಡೆಸುವ ಭರದಲ್ಲಿ ನಾನು ನಿಮಗೆ 6 ಸಾವಿರ ರೂಪಾಯಿ ನೀಡುತ್ತೇನೆ ಎಂದು ಹೇಳಿದ್ದರು.
ಇದುವರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಾವಿರಾರು ರೂಪಾಯಿಯ ಗಿಫ್ಟ್ ನೀಡಿದ್ದಾರೆ, ಎಲ್ಲ ಸೇರಿ 3000 ಆಗಬಹುದು, ನಾನು ಪ್ರತಿ ಮತದಾರರಿಗೆ 6 ಸಾವಿರ ರೂ ನೀಡುತ್ತೇನೆ. ಒಂದು ವೇಳೆ ಕೊಡದಿದ್ದರೆ ನನಗೆ ಓಟು ಹಾಕಬೇಡಿ ಎಂದು ಹೇಳಿದರು.
ಈ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಬಿಜೆಪಿ ರಮೇಶ್ ಜಾರಕಿಹೊಳಿಯಿಂದ ಅಂತರ ಕಾಯಿದುಕೊಂಡಿದೆ ಎಂಬ ಗುಸುಗುಸು ಕೇಳಿಬರುತ್ತಿದೆ. ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ಇದಕ್ಕೆಲ್ಲಾ ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ, 2023 ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


